ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ, ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ವತಿಯಿಂದ ಗೌಡ ಸಮುದಾಯದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ “ಒಕ್ಕಲಿಗ ಗೌಡರ ಇತಿಹಾಸ” ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ಫೆ.15 ಶನಿವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
ಅಪರಾಹ್ನ 2.30 ಕ್ಕೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಕೆಳಗೆ ನಮೂದಿಸಿರುವ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಫೆ.14 ರ ಮುಂಚಿತವಾಗಿ ತಮ್ಮ ಹೆಸರನ್ನು ತರಗತಿಯೊಂದಿಗೆ ನೊಂದಾಯಿಸಿ ಕೊಳ್ಳುವಂತೆ ತಿಳಿಸಲಾಗಿದೆ.
ಭಾಷಣದ ಅವಧಿ 3+1 ನಿಮಿಷಗಳು. ನಿರ್ಣಾಯಕರ ತೀರ್ಮಾನವೇ ಅಂತಿಮ ತೀರ್ಮಾನ. ದೂರವಾಣಿ ಸಂಖ್ಯೆ: 8073168595, 9632539058 ಸಂಪರ್ಕಿಸಬಹುದು.