ಪುತ್ತೂರು: ನೆಹರುನಗರ ಸಮೀಪದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು.
ಮಂಗಳವಾರ ಬೆಳಗ್ಗೆ 9 ಕ್ಕೆ ಮೂಲಸ್ಥಾನ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. 11.30 ಕ್ಕೆ ಕಲ್ಲೇಗ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ಸೇವೆ, ಬಳಿಕ ನಡೆದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು, ರಾತ್ರಿ 9.30 ಕ್ಕೆ ಗೋಂದೋಳು ಪೂಜೆ ನಡೆಯಿತು. ರಾತ್ರಿ 12 ಕ್ಕೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ವೈಭವದಿಂದ ಜರಗಿತು.