ಪುತ್ತೂರು: ಬೆದ್ರಾಳ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಖಾಸಗಿ ಕಾಲೇಜಿನಲ್ಲಿ ಅಲೈಡ್ ಹೆಲ್ತ್ ಸೈನ್ಸ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತಿಸಿದ್ದಳು. ತಕ್ಷಣ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮೃತಳು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾಳೆ.