ಕಾಣಿಯೂರು : ಕಾಣಿಯೂರು ಮಠದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಗುರುವಾರ ಬೆಳಿಗ್ಗೆ ನಡೆಯಿತು.
ಮೊದಲಿಗೆ ಕಾಣಿಯೂರು ಮಠದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 9 ಗಂಟೆಗೆ ಗೊನೆ ಮುಹೂರ್ತ ನೆರವೇರಿಸಲಾಯಿತು.
ಜಾತ್ರೋತ್ಸವದ ಅಂಗವಾಗಿ ಫೆ.26 ರಂದು ಜಾತ್ರೋತ್ಸವ ಆರಂಭಗೊಳ್ಳಲಿದ್ದು, ಮಾ.4 ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.