ಸುಳ್ಯ : ಸ್ವಂತ ಅಪ್ಪನೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ಆರೋಪ ಕೇಳಿ ಬಂದಿದೆ. ಘಟನಾನುಸಾರವಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ 17 ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಘಟನೆಯ ಕುರಿತು ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.