ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರದ ನಿರ್ಮಾಣದ ಕಾಮಗಾರಿಗೆ ಮೊತ್ತವನ್ನು ಹಸ್ತಾಂತರಿಸಲಾಯಿತು.
ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ತಾಲೂಕಿನ ಯೋಜನಾಧಿಕಾರಿ ರಮೇಶ್ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯ ನವೀನ್ ಕುಮಾರ್ ಪದಬರಿ, ಒಕ್ಕೂಟದ ವಲಯಾಧ್ಯಕ್ಷ ರಾಬರ್ಟ್ ಫೆರ್ನಾಂಡಿಸ್, ಪೆರ್ನೆ ಬಿಳಿಯೂರು ಒಕ್ಕೂಟದ ಅಧ್ಯಕ್ಷ ಗೋಪಾಲ ಸಪಲ್ಯ, ಪೆರ್ನೆ ಬಿ ಒಕ್ಕೂಟದ ಅಧ್ಯಕ್ಷ ಯಶೋದಾ ಮತ್ತು ಪದಾಧಿಕಾರಿಗಳು, ಭಜನಾ ಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ್, ಕಾರ್ಯದರ್ಶಿ ಗಿರೀಶ್ ಪೆರ್ಗಡೆ, ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಹಾಗೂ ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.