ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕುರಿತು ತಾಂಬೂಲ ಪ್ರಶ್ನೆ ಫೆ.16 ರಂದು ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ.
ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ಬೆಳಿಗ್ಗೆ 9 ರಿಂದ ಸಂಜೆ ಗಂಟೆ 5 ರ ತನಕ ತಾಂಬೂಲ ಪ್ರಶ್ನೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.