ಪುತ್ತೂರು: ನಗರಸಭಾ ವ್ಯಾಪ್ತಿಯ ವಾರ್ಡ್ 23 ಸಾಮೆತಡ್ಕದಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಮಂಜೂರಾದ ಅನುದಾನದಿಂದ ರಸ್ತೆ ಹಾಗೂ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು.
ಸುಮಾರು 60 ಲಕ್ಷ ರೂ. ಅನುದಾನ ಮಂಜೂರುಗೊಂಡಿದ್ದು, ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನೂರಾರು ಮನೆಯಿರುವ ಈ ಪ್ರದೇಶದಲ್ಲಿ ಮಳೆಗಾಲದಲ್ಲಿ ತಡೆಗೋಡೆ ಇಲ್ಲದೆ ಮಳೆ ನೀರು ಬಂದು ಸಮಸ್ಯೆ ಉಂಟಾಗಿದೆ. ಅಲ್ಲದೆ ಇಲ್ಲಿ ರಸ್ತೆಯೂ ಇದಕ್ಕಾಗಿ ಸುಸಜ್ಜಿತ ರಸ್ತೆ ಸಹಿತ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ ಎಂದ ಅವರು, ಪ್ರಸ್ತುತ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಬೇರೆ ಬೇರೆ ಕಾಮಗಾರಿಗಳನ್ನು ಹಮ್ಮಿಕೊಳ್ಳುವ ಮೂಲಕ ಅಭಿವೃದ್ಧಿ ಪರ್ವ ಆರಂಭಗೊಳಿಸಲಾಗಿದೆ. ಒಟ್ಟಾರೆಯಾಗಿ ಪಕ್ಷಾತೀತವಾಗಿ ನಾವು ಜನರು ಜೀವನ ಪೂರ್ತಿ ನೆನಪಿಡುವ ಕಾಮಗಾರಿಯನ್ನು ಹೆಚ್ಚಿನ ಆದ್ಯತೆಯಲ್ಲಿ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಬ್ಲಾಕ್‍ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಕುಮಾರ್ ಶೆಟ್ಟಿ, ಮೌರಿಸ್ ಮಸ್ಕರೇನಸ್, ಯುವ ಬ್ಲಾಕ್ ಅಧ್ಯಕ್ಷ ನಿಖಿಲ್ ಕಲ್ಲಾರೆ, ಪುಡಾ ಸದಸ್ಯ ಲ್ಯಾನ್ಸಿ ಮಸ್ಕರೇನಸ್, ಮತ್ತಿತರರು ಸ್ಥಳೀಯ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.