ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು

ನೀರಿನಲ್ಲಿ ಯೋಗನಿದ್ರೆಯಲ್ಲಿರುವಾಗಲೇ ಬಂದ ಮೃತ್ಯು

ಚಾಮರಾಜನಗರ: ನುರಿತ ಯೋಗಪಟುವೊಬ್ಬರು ನದಿಯಲ್ಲಿ ಯೋಗ ಮಾಡುತ್ತಿರುವಾಗಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಮೃತ ದುರ್ದೈವಿ. ತೀರ್ಥಸ್ನಾನ ಮಾಡಲೆಂದು ನಾಗರಾಜ್​ ಕಾವೇರಿ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯೋಗಪಟು ನಾಗರಾಜ್​ ಅವರು ಕೊಳ್ಳೇಗಾಲ ಪಟ್ಟಣದ ಲಕ್ಷ್ಮಿನಾರಾಯಣ ದೇವಾಲಯದ ಬೀದಿಯಲ್ಲಿ ವಾಸವಾಗಿದ್ದು, ಕಳೆದ 30 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದರು. ಕೊಳ್ಳೇಗಾಲ ಪಟ್ಟಣದಲ್ಲಿ ಯೋಗಗುರು ಎಂದೇ ಖ್ಯಾತನಾಮರಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top