ಕಕ್ಕಿಂಜೆ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಬೆಳ್ತಂಗಡಿ :  ಕಕ್ಕಿಂಜೆ ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹಜ್ಜೆನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದ್ದು  ಸುಮಾರು 10ಮಕ್ಕಳು  ಹೆಜ್ಜೇನುದಾಳಿಯಿಂದ  ಅಸ್ವಸ್ಥರಾಗಿದ್ದು  ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ,

 ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಲವು ಮಕ್ಕಳಿಗೆ ಈ ವೇಳೆ ಹಜ್ಜೇನು ಕಚ್ಷಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಕ್ಕಳು ಅಸ್ವಸ್ಥರಗಿದ್ದು ಅಪಾಯದಿಂದ ಪಾರಾಗಿದ್ದಾರೆ.  ಶಾಲೆಯ ಸುತ್ತ ಹೆಜ್ಜೇನುಗಳು ಸುತ್ತಾಡುತ್ತಿದ್ದು ಸ್ಥಳೀಯರು ಬೆಂಕಿ ಹೊಗೆ ಹಾಕಿ ಹೆಜ್ಜೇನುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top