ಕೊಂಬಾರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಫೆ.13 ರಿಂದ ಫೆ. 21ರವರೆಗೆ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ.
ಫೆ.13ರಂದು ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ನಡೆಯಿತು.
ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಹಾಗೂ ಪರಮಪೂಜ್ಯ ರಾಜರ್ಷಿ ಡಾ| ಶ್ರೀ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಹಾಗೂ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.16 ಭಾನುವಾರದಿಂದ ಫೆ. 21 ಶುಕ್ರವಾರದವರೆಗೆ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ ನಡೆಯಲಿದೆ.