ಪ್ರತಿತಿಂಗಳು ಕೊಡಲಿಕ್ಕೆ ಅದು ಸಂಬಳ ಅಲ್ಲ ಎಂದ ಸಚಿವ
ಬೆಂಗಳೂರು: ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿಮತ್ತು ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾದ ಜನ ಯಾವಾಗ ಸಿಗಬಹುದು ಎಂದು ಕಾಯುತ್ತಿದ್ದಾರೆ. ಸರಕಾರ ಇನ್ನೂ ಈ ಬಗ್ಗೆ ಖಚಿತವಾದ ಹೇಳಿಕೆ ನೀಡಿಲ್ಲ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗೃಹಲಕ್ಷ್ಮೀ ಕುರಿತಾಗಿ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.
ಗೃಹಲಕ್ಷ್ಮೀ ಸ್ಥಗಿವಾಗಿರುವ ಕುರಿತು ಪ್ರಶ್ನಿಸಿದಾಗ ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆ.ಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.
‘ಗೃಹಲಕ್ಷ್ಮಿ ಹಣ ತಿಂಗಳು ಬರುವ ಸಂಬಳ ಅಲ್ಲವೇ ಅಲ್ಲ. ಎರಡ್ಮೂರು ತಿಂಗಳಿಗೊಮ್ಮೆ, ನಮಗೆ ಇಷ್ಟ ಬಂದಾಗ ಕೊಡುತ್ತೇವೆ ಎಂದು ಹೇಳಿದ್ದರೆ ಮನೆ ಯಜಮಾನಿಯರು ಯಾರೂ ನಮ್ಮನ್ನ ಕೇಳುತ್ತಲೇ ಇರಲಿಲ್ಲ ಎಂದಿದ್ದಾರೆ.
ಗೃಹಲಕ್ಷ್ಮಿ ದುಡ್ಡಿಂದ ಫ್ರಿಜ್ ತೆಗೆದುಕೊಂಡರು, ಬೈಕ್ ತೆಗೆದುಕೊಂಡರು, ಹೋಳಿಗೆ ಊಟ ಹಾಕಿಸಿದರು ಎಂದು ರಾಜ್ಯ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡಿತ್ತು. ಆದರೆ ಈಗ 3-4 ತಿಂಗಳಿಂದ ಸರಿಯಾಗಿ ಹಣ ಹಾಕದೆ ಸತಾಯಿಸುತ್ತಿದೆ. ನಮಗೆ ಕೊಟ್ಟ ಮಾತು ಉಳಿಸಿಕೊಳ್ಳಿ ಎಂದು ಮಹಿಳೆಯರು ಆಗ್ರಹಿಸಿದ್ದಾರೆ.
ಈ ನಡುವೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯದ ಹಣ ಬಾಕಿ ಉಳಿಸಿಕೊಂಡಿರುವುದು ವಿಪಕ್ಷಗಳಿಗೆ ಅಸ್ತ್ರವಾಗಿದೆ. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಮೋಸ ಮಾಡುತ್ತಿದ್ದೀರಿ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆಂದೇ ಬಜೆಟ್‌ನಲ್ಲಿ ಹಣ ಎತ್ತಿಟ್ಟಿರುವಾಗ ಈಗ ಹಣ ಕೊಡದೆ ಸತಯಿಸುವುದು ಏಕೆ? ಎತ್ತಿಟ್ಟ ಹಣ ಯಾರ ಖಾತೆಗೆ ಹೋಗುತ್ತಿದೆ ಎಂದು ಬಿಜೆಪಿ ಪ್ರಶ್ನಿಸಿದೆ.