ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಮಾತೃಶ್ರೀ ಸುಶೀಲಾ ಶಿವಾನಂದ ರಾವ್ (86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತೀರಾ ಇತ್ತೀಚೆಗಿನವರೆಗೂ ಆರೋಗ್ಯವಾಗಿದ್ದ ಅವರು ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಪುತ್ರ, ಸೊಸೆ, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.