ರಾಜಸ್ಥಾನ : 9ನೇ ತರಗತಿ ವಿದ್ಯಾರ್ಥಿಯೋರ್ವಳು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ರಾಜಸ್ಥಾನದ ಬಾರಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಬಂದಿದೆ.
ಈ ಪ್ರಕರಣದಲ್ಲಿ ಅತ್ಯಂತ ವಿಸ್ಮಯವಾದ ವಿಷಯವೊಂದು ತಿಳಿದಿದೆ, ಅದೇನೆಂದರೆ ಮಗುವಿಗೆ ಜನ್ಮ ನೀಡಲು ಕಾರಣಕರ್ತ ಬಾಲಕಿಯ ಶಾಲೆಯಲ್ಲಿ ಓದುತ್ತಿದ್ದು, 10 ನೇ ತರಗತಿ ವಿದ್ಯಾರ್ಥಿ , ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತೆಯ ದೂರಿನ ಮೇರೆಗೆ, ಆರೋಪಿ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕೆಲವು ತಿಂಗಳುಗಳಿಂದ ಇಬ್ಬರ ನಡುವೆ ಪ್ರೇಮ ಸಂಬಂಧವಿತ್ತು. ಸಂತ್ರಸ್ತೆಯ ತಾಯಿ ತೀರಿಕೊಂಡಿದ್ದಾರೆ ಮತ್ತು ಆಕೆಯ ತಂದೆ ಕೆಲಸದಲ್ಲಿ ನಿರತರಾಗಿದ್ದಾರೆ. ಇದರಿಂದಾಗಿ ಸಂತ್ರಸ್ತೆ ಗರ್ಭಿಣಿ ಎಂಬ ವಿಷಯ ತಿಳಿದಿರಲಿಲ್ಲ. ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು, ಬಳಿಕ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದರು. ಆರೋಪಿ ಅಪ್ರಾಪ್ತ ವಯಸ್ಕನ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸ್ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.