ಮಾರ್ಚ್ ತಿಂಗಳಲ್ಲಿ ಶಾಲಾ- ಕಾಲೇಜುಗಳಿಗೆ ಪರೀಕ್ಷೆಗಳು ಆರಂಭವಾಗಿದ್ದು. ವಿದ್ಯಾರ್ಥಿಗಳು ಪರೀಕ್ಷೆ ಸಲುವಾಗಿ ಪೂರ್ವತಯಾರಿಯನ್ನು ನಡೆಸುತ್ತಿದ್ದಾರೆ. ಇದೇ ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ವಿದ್ಯಾರ್ಥಿಗಳು ಪರೀಕ್ಷೆಯ ಪೂರ್ ಸಿದ್ದತೆಯಲ್ಲಿದ್ದರೆ. ಎಕ್ಸಾಮ್ ಬೋರ್ಡ್ ಯಾವುದೇ ತೊಂದರೆಯಾಗದಂತೆ ಕಟ್ಟುನಿಟ್ಟಿನ ನಿಯಮ- ಸೂಚನೆಗಳ ಪೂರ್ವ ತಯಾರಿಯನ್ನು ಮಾಡಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಅಲ್ಲದೇ ಪರೀಕ್ಷೆ ಗೌಪ್ಯತೆ, ಪರೀಕ್ಷೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾಗದಂತೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ನಿಯಮಗಳು :
- ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಂದೋ ಬಸ್ತ್ ಕಲ್ಪಿಸಬೇಕು.
- ಪೊಲೀಸ್ ಅಧಿಕಾರಿಗಳ ರಕ್ಷಣೆಯ ಮುಖೇನಾ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವಂತದ್ದು.
- ಪ್ರಶ್ನೆಪತ್ರಿಕೆಗಳ ರಕ್ಷಣೆಗಾಗಿ ನೇಮಿಸಿರುವ ತಹಶೀಲ್ದಾರ್, ಬಿಇಒ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರನ್ನು ಒಳಗೊಂಡ ವಿಶೇಷ ಪ್ರಶ್ನೆ ಪತ್ರಿಕಾ ಪಾಲಕರ ತ್ರಿಸದಸ್ಯ ಸಮಿತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
- ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮ ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತಾಗಬೇಕು.
- ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್, ಗಾಳಿ-ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳು ಕಲ್ಪಿಸಬೇಕು.
- ಪರೀಕ್ಷಾ ಗೌಪ್ಯತೆ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು.
- ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163ರ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿಗೊಳಿಸಿ, ಆದೇಶಿಸುವರು. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿಸಿ ಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸಬೇಕು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿ ಟಿವಿ ಅಳವಡಿಸಬೇಕು ಎಂದು ನಿಯಮಗಳನ್ನು ಸೂಚಿಸಿದ್ದಾರೆ.