ಸುಳ್ಯ: ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು.

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ, ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ. ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ ನಿಟ್ಟಿನಲ್ಲಿ ಓದುವ ಹವ್ಯಾಸವನ್ನು ಮೂಡಿಸಿಕೊಂಡು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ ಕಾರ್ಯಕ್ರಮದ ಸಂಘಟಕರು, ಕನ್ನಡ ಸಂಘದ ಸಂಚಾಲಕರೂ ಆದ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕಿ ಡಾ. ಮಮತಾ ಕೆ ವಂದಿಸಿದರು. ವಿದ್ಯಾರ್ಥಿನಿ ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು.