ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ತಾಲೂಕು ಅಳಿಕೆ ವಲಯದ ನಿರ್ಕಜೆ ಪಂಚಾಯತ್ ಹಾಲ್ ನಲ್ಲಿ ಸ್ವಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನಿರ್ಕಜೆ ಒಕ್ಕೂಟದ ಅಧ್ಯಕ್ಷ ಭವ್ಯ ನೆರವೇರಿಸಿದರು.

ವಲಯ ಮೇಲ್ವಿಚಾರಕಿ ಮಾಲತಿ ಪ್ರಾಸ್ತವಿಕವಾಗಿ ಮಾತನಾಡಿದ್ದರು. ರುಡ್ ಸೆಟ್ ನಿರ್ದೇಶಕ ಅಜಯ್ ಸ್ವಉದ್ಯೋಗ ಹಾಗೂ ಸ್ವಉದ್ಯೋಗಕ್ಕೆ ಬೇಕಾದ ಬ್ಯಾಂಕ್ ಸಾಲದ ಬಗ್ಗೆ ಮಾಹಿತಿ ನೀಡಿದರು.
ಈ ಸಂಧರ್ಭ ಸಂಘದ ಸದಸ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಪೂರ್ಣಿಮಾ ಸ್ವಾಗತಿಸಿ, ಸೇವಾಪ್ರತಿನಿಧಿ ಕಾವ್ಯ ವಂದಿಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ ನಿರೂಪಿಸಿದರು.