ಹಾಸನ: ಧರ್ಮಸ್ಥಳಕ್ಕೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ವೇಗವಾಗಿ ಬಂದ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಸುರೇಶ್ (60), ಕುಮಾರ್ (55) ಮೃತಪಟ್ಟವರೆಂದು ಗುರುತಿಸಲಾಗಿದೆ.
ಮೃತರು ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.