ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ.
ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್ ನಾಪತ್ತೆಯಾಗಿದ್ದು, ಆತನ ಚಪ್ಪಲಿ ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಆತ ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ.
ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.