ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ | ನೆರವೇರಿದ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು | ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು.

ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು.

ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಮಹಾಶಿವರಾತ್ರಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top