ಪುತ್ತೂರು : ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು 9 ವರ್ಷದ ಅಪ್ರಾಪ್ತ ಬಾಲಕಿಗೆ ತೋರಿಸಿ, ಲೈಂಗಿಕ ಕಿರುಕುಳದ ಆರೋಪದ ಹಿನ್ನಲೆ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಇರ್ಷಾದ್(20) ಲೈಂಗಿಕ ಕಿರುಕುಳ ನೀಡಿದ ಆರೋಪಿ ಎನ್ನಲಾಗಿದೆ.
ಮಹಮ್ಮದ್ ಇರ್ಷಾದ್ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ 9 ವರ್ಷದ ಅಪ್ರಾಪ್ತಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ಫೆ.21ರಂದು ಅಪ್ರಾಪ್ತೆಯ ಪೋಷಕರು ಹಾಗೂ ಅಪ್ರಾಪ್ತೆ ಬಾಲಕಿ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.