ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು : 32ನೇ ವರ್ಷದ ಪುತ್ತೂರಿನ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಮಾ.1 ಹಾಗೂ 2 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕೀರ್ತಿಶೇಷ ಜಯಂತ ರೈ ಹಾಗೂ ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಆರಂಭಗೊಂಡ ಕಂಬಳ ಈ ಬಾರಿ 32ನೇ ವರ್ಷಕ್ಕೆ ಕಾಲಿಟ್ಟಿದೆ.  ಮತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ. ಎಸ್. ಅವರ ಗೌರವ ಸಂಚಾಲಕತ್ವದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರ ಮಾರ್ಗದರ್ಶನ ದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಮಾ.1 ಶನಿವಾರ ಬೆಳಿಗ್ಗೆ 10.15ಕ್ಕೆ  ಕಂಬಳದ ಉದ್ಘಾಟನೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್‍ ಪಂಜಿಗುಡ್ಡೆ ನೆರವೇರಿಸಲಿದ್ದು, ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸುವರು.

































 
 

ಸಂಜೆ 6 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು, ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಡಾ ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಕ್ಯಾ.ಬ್ರಿಜೇಶ್‍ ಚೌಟ, ಬೆಂಗಳೂರು ಎಂ.ಆರ್.ಜಿ. ಗ್ರೂಪ್ಸ್ ನ ಚೇರ್ಮ್ಯಾನ್‍ ಪ್ರಕಾಶ್‍ ಜಿ., ಮಂಡ್ಯ ಶಾಸಕ ರವಿ ಗಾಣಿಗ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ರಮಾನಾಥ ರೈ,  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಿಶೋರ್ ಕುಮಾರ್ ಪುತ್ತೂರು,  ಮಾಜಿ ಸಚಿವ ಅಭಯಚಂದ್ರ ಜೈನ್ ಮುಂತಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಡಾ। ಅಗರಿ ನವೀನ್ ಭಂಡಾರಿ (ಬ್ಯಾಂಕಿಂಗ್), ಸುರೇಶ್ ಭಟ್ ಬಲ್ನಾಡು (ಕೃಷಿ), ರೆ. ಫಾ| ವಿಜಯ ಹಾರ್ವಿನ್ (ಶೈಕ್ಷಣಿಕ) ಹರಿಪ್ರಸಾದ್ ರೈ (ಸಂಸ್ಥಾಪಕರು ಹೆಚ್. ಪಿ.ಆರ್. ವರ್ಸಿಂಗ್ ಕಾಲೇಜು. ಸಾಲೆತ್ತೂರು) ಮಹಮ್ಮದ್ ಕುಂಞಿ (ಕಂಬಳ) ಬಾಳೆಪುಣಿ ಸಂಕ ಇದು ಕುಂಞಿ ಬ್ಯಾರಿ (ಕಂಬಳ) ವಿನ್ವೆಂಟ್ ಫೆರ್ನಾಂಡಿಸ್ (ಸಾಮಾಜಿಕ, ಶೈಕ್ಷಣಿಕ) ಅವರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು.

ಮಾ.2 ಆದಿತ್ಯವಾರ ಬಹುಮಾನ ವಿತರಣೆ ಸಮಾರಂಭ ನಡೆಯಲಿದ್ದು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ, ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ “

ಈ ಬಾರಿ ವಿಶೇಷವಾಗಿ ಪುತ್ತೂರು ಕಂಬಳದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪುರುಷರ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ ನಡೆಯಲಿದೆ. ಮಾ.1 ರಂದು ಬೆಳಿಗ್ಗೆ 12 ಗಂಟೆಗೆ ಪ್ರೋ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಚಾಲನೆ ನೀಡಲಿದ್ದಾರೆ.

ಕರಿಬಳಕ್ಕೆ ಆರು ವಿಭಾಗಗಳ ಕೋಣಗಳು ಭಾಗವಹಿಸಲಿದ್ದು, ಕನೆಹಲಗೆ, ಅಡ್ಡಹಲಗೆ, ಹಗ್ಗ, ಹಿರಿಯ ಹಗ್ಗ ಕಿರಿಯ ವಾಗಿಲು ಹಿರಿಯ, ನೇಗಿಲು ಕಿರಿಯ ವಿಭಾಗದ ಸ್ಪರ್ಧೆಗಳಿದ್ದು, ಹಿರಿಯ es lasartert 2 (160) cartert | ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗಕ್ಕೆ ಪ್ರಥಮ | ಪವನ್ ಹಾಗೂ ದ್ವಿತೀಯ 14 ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ಅಲ್ಲದೆ ವಿಜೇತ ಕೋಣಗಳ ಮಾಲಕರಿಗೆ ಚಿನ್ನದೊಂದಿಗೆ ವಿಶೇಷ ಕೋಟಿಚೆನ್ನಯ ಟ್ರೋಪಿ ನೀಡಿ ಗೌರವಿಸಲಾಗುವುದು. ಭಾಗವಹಿಸುವ ಕೋಣಗಳಿಗೆ ಸುಪಕೃತ ಬ್ಯಾಂಕ್‌ನೊಂದಿಗೆ ನೀರಿನ ವ್ಯವಸ್ಥೆ, ಮಾಡಿರುತ್ತೇವೆ. ಅಲ್ಲದೇ ಹೊನಲು ಬೆಳಕಿನ ವ್ಯವಸ್ಥೆ, ಸುಪಕ್ಷತ ಪ್ರೇಕ್ಷಕರ ಚಪ್ಪರ, ಶಿಕ್ಷಕ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ, ಆಕರ್ಷಕ ವೇದಿಕೆ. ಮನಮೆಚ್ಚುವ ವೀಕ್ಷಕ ವಿವರಣೆ. ಉತ್ತಮ ಕರೆ ನಿರ್ಮಾಣಾ, ಕರೆಗೆ ಶುದ್ಧ ನೀರಿನ ವ್ಯವಸ್ಥೆ, ಸುಸಜ್ಜಿತ ಸ್ಟಾಲ್‌ಗಳು ಕೋಣಗಳ ಯಜಮಾನರಿಗೆ ಪ್ರತ್ಯೇಕ ಚಪ್ಪರದ ವ್ಯವಸ್ಥೆ ವರ್ಷಕ್ಕೊಂದು ಹೊಸತನದ ಶೇರ್ಪಡೆಯೊಂದಿಗೆ ಕಂಬಳ ಕ್ಷೇತ್ರದಲ್ಲೇ ಶ್ರೇಷ್ಠ ಕಂಬಳ ಎಂಬ ಹೆಸರನ್ನು ಪಡೆದಿದೆ. ಎಂದು ತಿಳಿಸಿದರು.

ವಿಶೇಷ ಆಕರ್ಷಣೆ :

ಖ್ಯಾತ ಚಲನ ಚಿತ್ರ ನಟ-ನಟಿಯರಾದ ಖ್ಯಾತ ನಿರೂಪಕಿ ಅನುಶ್ರೀ,  ಬಿಗ್ಬಾಸ್ ಸೀಸನ್‍ 11ರ ವಿನ್ನರ್‍  ಹನುಮಂತ್,  ಸ್ಪರ್ಧಿ ಧನ್ ರಾಜ್ ಆಚಾರ್, ನಟಿ ಅರ್ಚನಾ ರೈ, ನಟ ಲೂಸ್ ಮಾದ, ನಟ ಹಾಗೂ ಬಿಗ್ಬಾಸ್ ಸ್ಪರ್ಧಿ ಉಗ್ರ ಮಂಜು, ನಟ ಗಗನ್ ಅನ್ನಪ್ಪ, ನಿರ್ದೇಶಕ ಸುಖೇಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಸಂಚಾಲಕ ವಸಂತ ಕುಮಾರ್ ರೈ ದುಗ್ಗಳ , ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡ, ಪ್ರಧಾನ ಕಾರ್ಯದರ್ಶಿ ದಿನೇಶ್‍ ಕುಲಾಲ್‍ ಪಿ.ವಿ., ನಿರಂಜನ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top