ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ

ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿ ಹೆಸರು, ನಿರ್ದೇಶನಗಳನ್ನು ಮುದ್ರಿಸಲು ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಿದ್ದು, ಒಂದು ಭಾಷೆ ಬೆಳವಣಿಗೆ ಆಗಬೇಕಾದರೆ ಆ ನೆಲದಲ್ಲಿ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಹೀಗಾಗಿ ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯವಾಗಿರಬೇಕು ಉತ್ಪನ್ನದ ಹೆಸರು ಮತ್ತು ಅವುಗಳ ನಿರ್ದೇಶನ ಕನ್ನಡ ಭಾಷೆಯಲ್ಲಿ ಇರಬೇಕು. ಸರ್ಕಾರಿ ಮತ್ತು ಖಾಸಗಿ ಉತ್ಪಾದಕರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ.

69ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಖಾಸಗಿ ಅಥವಾ ಸರ್ಕಾರಿ ವಲಯದಿಂದ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳು ಸಾಮಾನ್ಯವಾಗಿ ಇಂಗ್ಲಿಷ್‌ನಲ್ಲಿ ಮಾತ್ರ ಲೇಬಲ್‌ಗಳನ್ನು ಹೊಂದಿರುತ್ತವೆ. ಭವಿಷ್ಯದಲ್ಲಿ, ನಾವು ಕನ್ನಡವನ್ನೂ ಸೇರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದರು. ಅದರಂತೆ ಇದೀಗ ಉತ್ಪನ್ನಗಳ ಇತರೆ ಭಾಷೆಯ ಜೊತೆ ಕನ್ನಡ ಕಡ್ಡಾಯವಾಗಿ ಇರಬೇಕೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

































 
 

ಭಾಷೆ ಈ ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಕೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸವಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿ೦ದ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು 12.03.2024ರಿಂದ ಜಾರಿಗೆ ತಂದಿರುತ್ತದೆ. ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಲೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಮಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top