ವಾಟಾಲ್ ನಾಗರಾಜ್ ನೇತೃತ್ವದಲ್ಲಿ ಬಂದ್‌ಗೆ ಕರೆ
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ಸಹ ಬೆಂಬಲ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಮಾರ್ಚ್3ರಂದು ಸಭೆ ನಡೆಸಿ ತಿರ್ಮಾನ ಪ್ರಕಟಿಸುವುದಾಗಿ ಹೇಳಿದೆ.
ಬೆಳಗಾವಿಯಲ್ಲಿ ಇತ್ತೀಚೆಗೆ ಕರ್ನಾಟಕ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು, ಕನ್ನಡಿಗರಿಗೆ ಅಪಮಾನ ಮಾಡಿ ಮರಾಠಿಗರು ದೌರ್ಜನ್ಯ ಮೆರೆದಿದ್ದಾರೆ. ಕನ್ನಡ, ನೆಲ, ಜಲ ಭಾಷೆ ವಿಚಾರಕ್ಕೆ ಬಂದರೆ ನಮ್ಮ ಬೆಂಬಲ ಸದಾ ಇರುತ್ತದೆ. ಮಾರ್ಚ್ 22ರ ಬಂದ್ ದಿನ ಚಿತ್ರೀಕರಣ ಮಾಡದೆ ಸಿನಿಮಾ ಥಿಯೇಟರ್ ಬಂದ್ ಮಾಡಿ ಬೆಂಬಲಿಸಲಾಗುವುದು ಚೇಂಬರ್ ತಿಳಿಸಿದೆ.
ಈಗಾಗಲೇ ರಾಜ್ಯ ಆಟೋ ಯೂನಿಯನ್ ವಾಟಾಳ್ ನಾಗಾರಾಜ್ ಅವರ ಕರೆಗೆ ಓಗೊಟ್ಟು ಬಂದ್‌ಗೆ ಸಹಕಾರ ನೀಡುವುದಾಗಿ ತಿಳಿಸಿದೆ. ಅದೇ ರೀತಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣವು ಅಖಂಡ ಕರ್ನಾಟಕ ಬಂದ್ ಬೆಂಬಲಿಸುವುದಾಗಿ ತಿಳಿಸಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಪುಂಡರ ದಬ್ಬಾಳಿಕೆಗೆ ಅಂತ್ಯ ಹಾಡಬೇಕಿದೆ. ಸರ್ಕಾರ ಸದರಿ ಘಟನೆ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕನ್ನಡ ನೆಲದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಖಂಡನೀಯ ಎಂದರು. ಬಂದ್ ವೇಳೆ ನಮ್ಮ ಬಣದಿಂದ ಹೋರಾಟ ನಡೆಸುವುದಾಗಿ ಪ್ರವೀಣ್ ಶೆಟ್ಟಿ ಅವರು ಪ್ರತಿಕ್ರಿಯಿಸಿದ್ದಾರೆ.