ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಫೈನಲ್ ಹಣಾಹಣಿಯೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು.
ಕಂಬಳ ಕೂಟದಲ್ಲಿ ಸುಮಾರು 170 ಜೋಡಿ ಕೋಣಗಳು ಈ ಬಾರಿ ಭಾಗವಹಿಸಿದ್ದವು.
ಕೋಟಿ-ಚೆನ್ನಯ ಜೋಡುಕರೆ ಕಂಬಳ ಫಲಿತಾಂಶ :
ಹಗ್ಗ ಹಿರಿಯ : ಪ್ರಥಮ ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ (ಕೋಣ ಓಡಿಸಿದವರು ಕಕ್ಕೆಪದವು ಪೆಂರ್ಗಾಲು ಕಾರ್ತಿಕ್ ಗೌಡ), ದ್ವಿತೀಯ ನಂದಳಿಕೆ ಶ್ರೀಕಾಂತ್ ಭಟ್.
ಹಗ್ಗ ಕಿರಿಯ: ಪ್ರಥಮ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ ಶೆಟ್ಟಿ (ಮಂಗಲ್ಪಾಡಿ ರಕ್ಷಿತ್ ಶೆಟ್ಟಿ), ದ್ವಿತೀಯ ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ ಬಿ.
ಅಡ್ಡ ಹಲಗೆ : ಪ್ರಥಮ ಪುತ್ತೂರು ಸರೋವರ ಹವೀಶ ಹರೀಶ್ ಶಾಂತಿ (ಭಟ್ಕಳ ಹರೀಶ್), ದ್ವಿತೀಯ : ಬೋಳಾರ ತ್ರಿಶಾಲ್ ಕೆ. ಪೂಜಾರಿ.
ನೇಗಿಲು ಹಿರಿಯ : ಪ್ರಥಮ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ (ಮಿಜಾರು ಅಶ್ವತ್ಥಪುರ), ದ್ವಿತೀಯ : ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ( )
ನೇಗಿಲು ಕಿರಿಯ : ಮುನಿಯಾಲು ಉದಯ ಕುಮಾರ್ ಶೆಟ್ಟಿ (ಕುಂದಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್), ದ್ವಿತೀಯ : ಮಿಜಾರು ಹರಿಮೀನಾಕ್ಷಿ ದೋಟ ಹರಿಯಪ್ಪ ಶೆಟ್ಟಿ
ಕನಹಲಗೆಯಲ್ಲಿ ನಿಶಾನೆಗೆ ನೀರು ಹಾಯಿಸಿದ ಹಂಕರಜಾಲು ಶ್ರೀನಿವಾಸ ಬಿರ್ಮಣ್ಣ ಶೆಟ್ಟಿ ಪ್ರಥಮ (ಸುದೀರ್ ದೇವಾಡಿಗ), ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ ದ್ವಿತೀಯ (ಬೈಂದೂರು ಹೊಸಕೋಟೆ ಮಹೇಶ್ಪೂಜಾರಿ)
ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಜಯಗಳಿಸಿದ ಕೋಣದ ಯಜಮಾನರಿಗೆ ಬಹುಮಾನ ವಿತರಿಸಲಾಯಿತು. ಕೋಟಿ ಚೆನ್ನಯ ಜೋಡು ಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಕಂಬಳ ಸಮಿತಿ ಸಂಚಾಲಕ ವಸಂತ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ, ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ, ಉಪಾಧ್ಯಕ್ಷ ಶಿವರಾಮ ಆಳ್ವ, ಸದಸ್ಯ ಯೋಗೀಶ್ ಸಾಮಾನಿ ಸಂಪಿಗೆದಡಿ, ಕೃಷ್ಣಪ್ರಸಾದ್ ಆಳ್ವ,, ಕಂಬಳ ಸಮಿತಿ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
























