ಪುತ್ತೂರು: ಮಂಗಳೂರಿನಿಂದ ಹೊರಟಿದ್ದ ಕಣ್ಣೂರು ಎಕ್ಸ್’ಪ್ರೆಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಪುತ್ತೂರು ರೈಲ್ವೇ ನಿಲ್ದಾಣದಿಂದ ಒಂದು ಕಿ.ಮೀ. ದೂರದಲ್ಲಿ ಗಂಟೆಗೂ ಹೆಚ್ಚಿನ ಕಾಲ ನಿಂತ ಪರಿಣಾಮ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಯಿತು.
ಭಾನುವಾರ ರಾತ್ರಿ 9.30ಕ್ಕೆ ಕಣ್ಣೂರು ಎಕ್ಸ್’ಪ್ರೆಸ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಆಗಮಿಸಿತ್ತು. ಈ ರೈಲು ಬೆಳಿಗ್ಗೆ 6ರ ಸುಮಾರಿಗೆ ಬೆಂಗಳೂರಿಗೆ ತಲುಪಬೇಕಿತ್ತು, ಆದರೆ ವಿಳಂಬವಾಗುವ ಸಾಧ್ಯತೆ ಇದೆ.ಪುತ್ತೂರಿನಿಂದ ಸುಮಾರು 1.ಕಿ.ಮೀ ಮುಂದೆ ಸಾಗಿದ ರೈಲು ಅಚನಕಾಗಿ ನಿಂತಿದೆ. ಸುಮಾರು ಒಂದು ಗಂಟೆಗಳ ಕಾಲ ಕೆಟ್ಟು ನಿಂತ ಬಳಿಕ ಪ್ರಯಾಣಿಕರಿಗೆ ಸಮಸ್ಯೆಯ ಬಗ್ಗೆ ತಿಳಿದು ಬಂದಿದೆ.
ಬಳಿಕ ಸುಬ್ರಹ್ಮಣ್ಯದಿಂದ ರೈಲು ಇಂಜಿನ್ ತರಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
























