ಬಂಟ್ವಾಳ : ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ಬಳಿ ನಡೆದಿದೆ.
ಬಿಸಿರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಕಡೆಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.
ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.