ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ

ಕನ್ನಡದ ನಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗೆದಷ್ಟೂ ಆಳ

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿ ಒಂದೆರಡು ಬಾರಿ ಅಲ್ಲ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು ನಾನು ಡಿಜಿಪಿ ಮಗಳು ಎಂದು ತಪಾಸಣೆಗೆ ಒಳಗಾಗದೆ ಹೊರಗೆ ಬಂದಿದ್ದಳು. ಪ್ರತಿಬಾರಿ ಆಕೆಯನ್ನು ಕರೆದೊಯ್ಯಲು ವಿಮಾನ ನಿಲ್ದಾಣ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಬಸವರಾಜು ಹೋಗುತ್ತಿದ್ದರು. ಈ ಜಗಳದ ಬಳಿಕ ರನ್ಯಾಳ ಮೇಲೆ ಕಣ್ಣಿಟ್ಟಿದ್ದ ಡಿಆರ್‌ಐ ಅಧಿಕಾರಿಗಳು ಆಕೆಯ ವಿದೇಶ ಪ್ರಯಾಣದ ಹಿನ್ನೆಲೆಯನ್ನು ಕೆದಕುತ್ತಾ ಹೋದಾಗ ಒಂದೊಂದಾಗಿಯೇ ಎಲ್ಲವೂ ಬಯಲಾಗಿದೆ.
ಕಳೆದೊಂದು ವರ್ಷದಿಂದ ನಿರಂತರವಾಗಿ ದುಬೈ ಹಾಗೂ ಮಲೇಷ್ಯಾಕ್ಕೆ ರನ್ಯಾ ಪಯಣಿಸಿದ್ದಳು. ಅದರಲ್ಲೂ ಹೆಚ್ಚಿನ ಬಾರಿ ದುಬೈಗೆ ಹೋಗುತ್ತಿದ್ದ ರನ್ಯಾಳಿಗೆ ಯಾವುದೇ ಹೂಡಿಕೆ, ರಕ್ತ ಸಂಬಂಧಿಕರು ಇಲ್ಲ ಎಂಬ ವಿಚಾರ ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತ ಡಿಆರ್‌ಐ ಅಧಿಕಾರಿಗಳು ಆಕೆಯ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.

































 
 

ರನ್ಯಾ ಮತ್ತೆ ದುಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೇ ಜಾಗೃತರಾದ ಅಧಿಕಾರಿಗಳುಆಕೆಯ ಬರುವಿಕೆಗಾಗಿ ಕಾಯುತ್ತಿದ್ದರು. ಮಾ.3ರಂದು ರನ್ಯಾ ಪತಿ ಜೊತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಣಕ್ಕೆ ಬಂದಿಳಿಯುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಗಲೂ ರನ್ಯಾಳನ್ನು ತಪಾಸಣೆ ಇಲ್ಲದೆ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್‌ಕಾನ್‌ಸೆಬಲ್ ಬಸವರಾಜ್ ತೆರಳಿದ್ದರು. ರನ್ಯಾಳನ್ನ ಅಧಿಕಾರಿಗಳು ವಶಕ್ಕೆ ಪಡೆದಾಗ ಅವರು ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ಮಗಳು ಎಂದಿದ್ದಾರೆ. ಕೂಡಲೇ ರನ್ಯಾಳನ್ನು ಲೋಹ ಪರಿಶೋಧಕ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ತಂದಿರುವುದು ತಿಳಿದಿದೆ. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡು ಬಳಿಕ ಟೇಪ್‌ನಿಂದ ಸುತ್ತಿಕೊಂಡಿದ್ದಳು. ಯಾವುದೇ ಸ್ಕ್ಯಾನರ್‌ನಲ್ಲಿ ಅನುಮಾನ ಬಾರದಂತೆ ಕ್ರ್ಯಾಂಪ್‌ ಬ್ಯಾಂಡೇಜ್ ಹಾಕಿಕೊಂಡು ಬಂದಿದ್ದಳು. ಕೂಡಲೇ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ಪೊಲೀಸ್ ಅಧಿಕಾರಿಯ ಮಗಳು ಎನ್ನುವುದು ಬಯಲಾಗಿದೆ.

ನಟಿ ರನ್ಯಾರನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎನ್ನಲಾಗಿದೆ.
17 ಕೋಟಿ ಬೆಲೆಯ ಚಿನ್ನ ಖರೀದಿ ಮಾಡುವಷ್ಟು ರನ್ಯಾ ಶ್ರೀಮಂತಳಲ್ಲ. ರನ್ಯಾ ಹಿರಿಯ ಪೊಲೀಸ್ ಅಧಿಕಾರಿಯ ಮಲಮಗಳು. ಆಕೆಯನ್ನು ಬಳಸಿಕೊಂಡರೆ ಸುಲಭವಾಗಿ ಚಿನ್ನ ಸಾಗಾಟ ಮಾಡಬಹುದಾಗಿದೆ. ಇದೇ ಲೆಕ್ಕಾಚಾರದಲ್ಲಿ ರನ್ಯಾಳನ್ನು ಚಿನ್ನ ಸಾಗಾಟದಲ್ಲಿ ಬಳಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಅಕ್ರಮ ಚಿನ್ನ ಸಾಗಾಟದಲ್ಲಿ ವಿಮಾನ ನಿಲ್ದಾಣದ ಕೆಲ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಚಿನ್ನ ಸಾಗಾಟದಲ್ಲಿ ನಟಿ ರನ್ಯಾಗೆ ಕೆಜಿಗೆ ನಾಲ್ಕರಿಂದ ಐದು ಲಕ್ಷ ಕಮಿಷನ್ ನೀಡುತ್ತಿದ್ದ ಬಗ್ಗೆ ಮಾಹಿತಿ ಇದೆ. ರನ್ಯಾ ಬೆಂಗಳೂರಿಗೆ ತಂದ ಚಿನ್ನವನ್ನು ಯಾರಿಗೆ ಕೊಡುತ್ತಿದ್ದಳು ಎನ್ನುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಾಗುತ್ತಿದೆ. ಕಳೆದ ಎರಡು ವರ್ಷದ ರನ್ಯಾ ಬ್ಯಾಂಕ್ ವಿವರ, ಆಕೆಯ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಡಿಆರ್‌ಐ ಅಧಿಕಾರಿಗಳು ಅಸಲಿ ಕಿಂಗ್‌ಪಿನ್‌ಗಳ ಬೆನ್ನು ಬಿದ್ದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top