ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ : ಸಿದ್ದರಾಮಯ್ಯ ಘೋಷಣೆ

ನಕ್ಸಲ್‌ ಬಾಧಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ 10 ಕೋ.ರೂ.

ಬೆಂಗಳೂರು: ರಾಜ್ಯ ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದಾಗಿ ಹೇಳಿದ್ದಾರೆ.

ಕಳೆದ ಫೆ.7ರಂದು ನ್ಯೂಸ್‌ ಕಾರ್ಕಳ ವೆಬ್‌ಸೈಟ್‌ ರಾಜ್ಯ ನಕ್ಸಲ್‌ ಮುಕ್ತ-ಎಎನ್‌ಎಫ್‌ ಮುಂದಿನ ಕಾರ್ಯವೇನು ಎಂಬ ಶೀರ್ಷಿಕೆಯಲ್ಲಿ ಈ ಕುರಿತು ವಿಶೇಷ ವರದಿ ಪ್ರಟಿಸಿತ್ತು.
ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ರೂಪಿಸುವುದಾಗಿ ತಿಳಿಸಿದರು.

 
 

ಸೈಬರ್ ಅಪರಾಧ ವಿಭಾಗಕ್ಕೆ 5 ಕೋಟಿ ರೂ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಮತ್ತು ಮಾದಕದ್ರವ್ಯ ಬಳಕೆ ಮತ್ತು ವ್ಯಾಪಾರದ ವಿರುದ್ಧ ಕಠಿಣಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗವನ್ನು ಬಲಗೊಳಿಸಲು 5 ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top