ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ

ಗುತ್ತಿಗೆಯಲ್ಲಿ ಮೀಸಲಾತಿ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ

ಬೆಂಗಳೂರು : ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸುವ ಮೂಲಕ ಸಿದ್ದರಾಮಯ್ಯ ತನ್ನ ಮತಬ್ಯಾಂಕನ್ನು ಭದ್ರಗೊಳಿಸಿದ್ದಾರೆ. ಮೌಲಾನಾ ಆಜಾದ್ ಶಾಲೆಗಳ ಉನ್ನತೀಕರಣ, ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗದ ಪ್ರಾರಂಭ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಸೇರಿದಂತೆ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದಾರೆ. ಹಲವರ ವಿರೋಧದ ನಡುವೆಯೂ ಸದ್ದಿಲ್ಲದೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದವರಿಗೆ ನೀಡಿರುವಂತೆ ಮುಸ್ಲಿಮರಿಗೂ ಶೇ.4ರಷ್ಟು ಮೀಸಲಾತಿ ಕಲ್ಪಿಸಿದ್ದಾರೆ.
ಎಸ್​ಸಿ, ಎಸ್​ಟಿ ಸಮುದಾಯಕ್ಕೆ 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಿದ್ದಾರೆ. ಇದಕ್ಕಾಗಿ ಎಸ್​ಸಿಪಿ ಟಿಎಸ್​ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಘೋಷಿಸಿದ್ದಾರೆ. ಇದರ ಜೊತೆಗೆ ಮುಸ್ಲಿಮರಿಗೂ ಸಹ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ರಚನೆಯಾದಾಗಿನಿಂದ ಇದು ಮುಸ್ಲಿಂ ಓಲೈಕೆ ಸರ್ಕಾರ ಎಂಬ ಹಣೆ ಪಟ್ಟಿ ಹೊತ್ತಿದೆ. ಈಗ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4ರಷ್ಟು ಮೀಸಲಾತಿ ನೀಡಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕಳೆದ ಜನವರಿಯಲ್ಲಿ ಜಮೀರ್‌ ಅಹಮದ್‌ ಖಾನ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಮನವಿ ಮಾಡಿತ್ತು. ಬಜೆಟ್‌ ಅಧಿವೇಶನದಲ್ಲೇ ಇದನ್ನ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದವು, ಸಿಎಂ ಕೂಡ ಅಂದು ಸಕರಾತ್ಮಕವಾಗಿ ಸ್ಪಂದಿಸಿದ್ದು, ಬಜೆಟ್​ನಲ್ಲಿ ಘೋಷಿಸಿವುದಾಗಿ ಭರವಸೆ ನೀಡಡಿದ್ದರು. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ನಡೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಆದರೂ ಸದ್ದಿಲ್ಲದೆ ಸಿದ್ದರಾಮಯ್ಯ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಘೋಷಿಸಿ ಬಿಟ್ಟಿದ್ದಾರೆ.
ರಾಜ್ಯದಲ್ಲಿ ಈ ಹಿಂದೆ ವಕ್ಫ್‌ ಆಸ್ತಿ ವಿವಾದದಲ್ಲೇ ಸರ್ಕಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು, ಸರ್ಕಾರ ಮುಸ್ಲಿಂರ ಹಿಂದೆ ಬಿದ್ದಿದೆ. ವೋಟ್‌ ಬ್ಯಾಂಕ್‌ಗಾಗಿ ಮುಸ್ಲಿಂ ಓಲೈಕೆ ಮಾಡುತ್ತಿದೆ ಎಂದು ಬಿಜೆಪಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅನಂತರ ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಬೇಕು ಎಂದು ಸರ್ಕಾರ ಮುಂದಾಗಿದ್ದಾಗ ಬಿಜೆಪಿಗರು ಬಿಸಿಮುಟ್ಟಿಸಿದ್ದರು. ಈಗ ಬಜೆಟ್‌ ಅಧಿವೇಶನದಲ್ಲೇ ಮೀಸಲಾತಿ ಜಾರಿ ತಂದಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top