ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ

ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು  ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಎನ್ನಲಾಗಿದೆ.

ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top