ಬೆಳ್ತಂಗಡಿ : ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಮಾ.೩ರಂದು ನಡೆದ ಡೈಮಂಡ್ ಪೆಸ್ಟ್ ಚಾಲನೆ ನೀಡಿ ಮಾತನಾಡಿದರು.
ಜೆಸಿಐ ಭಾರತದ ವಲಯ ೧೫ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, ೮೦ ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭರಣಗಳಲ್ಲಿ ಉತ್ತಮ ಗುಣಮಟ್ಟ ಮತ್ತು ಶುದ್ದತೆಯನ್ನು ಕಾಪಾಡುತ್ತ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ರ್ಮಾಕೆಟಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ, ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿದರು. ಅಶ್ವಥ್ ವಂದಿಸಿದರು. ಕನ್ನಿಕಾ ಕಾರ್ಯಕ್ರಮ ನಿರೂಪಿಸಿದರು.