ಬಜೆಟ್‌: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ದಾಖಲೆಯ 16ನೇ ಬಜೆಟ್‌ ಮಂಡಿಸುತ್ತಿದ್ದು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಇದೇ ವೇಳೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ರೂ. ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

-50 ಸಾವಿರ ರೈತರಿಗೆ ಸಹಾಯಧನ
-೧.೮೧ ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿಗೆ ಸಹಾಯ ಧನ
-ಬೆಂಗಳೂರು ಸಹಾಯಧನ 7 ಸಾವಿರ ಕೋಟಿ ರೂ.ಗೇರಿಕೆ
-ಅಬಕಾರಿ ಇಲಾಖೆ ಗುರಿ ಹೆಚ್ಚ, 40 ಸಾವಿರ ಕೋಟಿ ರೂ. ಸಂಗ್ರಹ ಗುರಿ – ಮದ್ಯದ ದರ ಮತ್ತಷ್ಟು ಏರಿಕೆ ಸಾಧ್ಯತೆ
-ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, 10 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.
-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ರೂ., ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಳ
-ಗೃಹ ಲಕ್ಷ್ಮಿ ಯೋಜನೆಗೆ 2025-26 ಸಾಲಿನಲ್ಲಿ 28,608 ಕೋಟಿ ರೂ. ಅನುದಾನ
-ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಒಟ್ಟು 94,084 ಕೋಟಿ ರೂ. ಅನುದಾನ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂ. ಅನುದಾನ ಘೋಷಣೆ.
-ಮಲ್ಟಿಫ್ಲೆಕ್ಸ್​ಗಳಲ್ಲಿ ಸಿನಿಮಾ ಟಿಕೆಟ್​ಗೆ 200 ರೂಪಾಯಿ ನಿಗದಿ
-ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ -ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್​ಗಳಲ್ಲಿ ಏಕರೂಪದ ದರ ನಿಗದಿ
-ಎಸ್​ಸಿ, ಎಸ್​ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್​ಸಿಪಿ ಟಿಎಸ್​ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು.
-2025-26 ಸಾಲಿನಲ್ಲಿ ಪಂಚ ಗ್ಯಾರಂಟಿಗೆ 51,034 ಕೋಟಿ ರೂ‌. ಅನುದಾನ
-ನಗರಾಭಿವೃದ್ಧಿ, ಕೃಷಿ, ಶಿಕ್ಷಣಕ್ಕೆ ಬಜೆಟ್​ನಲ್ಲಿ ಆದ್ಯತೆ. ಜೊತೆಗೆ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಜೆಟ್​ನಲ್ಲಿ 5 ಗ್ಯಾರಂಟಿ ಯೋಜನೆಗಳ ಜೊತೆಗೆ 6 ಅಭಿವೃದ್ಧಿ ಆಯಾಮ ಗುರುತಿಸಿ ಕಾರ್ಯಕ್ರಮ. ಜೊತೆಗೆ ಗ್ರಾಮೀಣ ಅಭಿವೃದ್ಧಿಯೆ ಒತ್ತು.
-ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ಅನುದಾನ.
-1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಗೆ 440 ಕೋಟಿ ರೂ. ಸಹಾಯ ಧನ ನೀಡಲಾಗುವುದು.
-ಎಲ್ಲಾ ವಿಧಾನಸಬಾ ಕ್ಷೇತ್ರಗಳಲ್ಲಿ ರಸ್ತೆ ಅಭಿವೃದ್ಧಿಗೆ ₹8 ಸಾವಿರ ಕೋಟಿ ಮೀಸಲು.
-ಟನಲ್‌ ಯೋಜನೆಗೆ 40 ಸಾವಿರ ಕೋಟಿ ರೂ. ಘೋಷಣೆ
-ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಗೆ ಬದ್ಧವಾಗಿದ್ದು, 2030ರ ವೇಳೆಗೆ 20 ಲಕ್ಷ ಉದ್ಯೋಗ ಸೃಜಿಸುವ ಗುರಿ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top