ದೂರು ನೀಡಲು ಪೊಲೀಸ್ ಠಾಣೆಗೆ ಬಂದ ವ್ಯಕ್ತಿಯ ಮೇಲೆ ನಾಯಿ ದಾಳಿ

ವಿಟ್ಲ: ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ನಡೆದಿದೆ.

ಕರೋಪಾಡಿ ಗ್ರಾಮದ ಲಕ್ಷ್ಮಣ ಎಂಬವರು ವಿಚಾರವೊಂದಕ್ಕೆ ಠಾಣೆಗೆ ದೂರು ನೀಡಲು ಹೋಗಿದ್ದರು.  ಈ ಸಂದರ್ಭ ಠಾಣೆಯ ಮುಂಭಾಗ ಇದ್ದ ನಾಯಿ ಅವರ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಅವರ ಕಾಲಿನ ಮೂರು ಕಡೆ ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಅವರು ಠಾಣೆಯಿಂದ ಬಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ನಾಯಿ ಕಳೆದ ಹಲವಾರು ಸಮಯಗಳಿಂದ ಠಾಣೆಯಲ್ಲಿ ಬೀಡುಬಿಟ್ಟಿದ್ದು, ಕೆಲವು ದಿನಗಳ ಹಿಂದೆ ಇದೇ ರೀತಿಯಾಗಿ ನಾಯಿ ಠಾಣೆಗೆ ಬಂದವರ ಮೇಲೆ ದಾಳಿ ನಡೆಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top