ಪುತ್ತೂರು : ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸೋ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್, ಶಿಕ್ಷಣದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ. ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದೆ. ಜನರ ಮುಗಿಗೆ ತುಪ್ಪ ಸವರುವ ಯೋಜನೆಯಂತೆ ಪುತ್ತೂರಿಗೆ ಮೆಡಿಕಲ್ ಕಾಲೇಜು ಆಶ್ವಾಸನೆಯೂ ಒಂದಾಗಿದೆ. ಜಿಲ್ಲಾ ಕೇಂದ್ರ ಆಗುವ ಪುತ್ತೂರಿಗೆ ಮೆಡಿಕಲ್ ಕಾಲೇಜು ಆಗಬೇಕೆನ್ನುವುದು ಬಹುವರ್ಷದ ಬೇಡಿಕೆಯಾಗಿದ್ದು ಸಿಎಂ ಸಿದ್ದರಾಮಯ್ಯನವರು ಕೇವಲ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಮಾತ್ರ ತಿಳಿಸಿ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಆದರೆ ಬಜೆಟ್ ನಲ್ಲಿ ಯಾವೂದೇ ಹಣಕಾಸು ಇಡದೇ ಇದೊಂದು ಜನರನ್ನು ಮೂರ್ಖರಾಗಿಸಲು ಮಾಡಿರುವ ಯೋಜನೆಯಾಗಿದೆ. ಕರಾವಳಿಯ ಪ್ರಮುಖ ಆರ್ಥಿಕ ಶಕ್ತಿಯಾದ ಅಡಿಕೆಯ ಕೃಷಿಕರು ಹಲವು ವರ್ಷಗಳಿಂದ ಪರದಾಡುತ್ತಿರುವ ಪ್ರಮುಖ ಸಮಸ್ಯೆಯಾದ ಎಳೆಚುಕ್ಕಿ ಮತ್ತು ಹಳದಿ ರೋಗಕ್ಕೆ ವಿಶೇಷ ಅನುದಾನ ಘೋಷಿಸದೆ ಅಡಿಕೆ ಬೆಳೆಗಾರರನ್ನು ಸಂಪೂರ್ಣ ನಿರ್ಲಕ್ಷ್ಯಿಸಿದಂತಿದೆ.ಅಭಿವೃದ್ದಿ ಪೂರಕವಾದ ಹಾಗೂ ನಿರುದ್ಯೋಗ ನಿವಾರಣೆಗೆ ಯಾವೂದೇ ಒಲವು ತೋರಿಸದಿರುವ ಮೂಲಕ ಇದೊಂದು ಅಲ್ಪಸಂಖ್ಯಾತ ಓಲೈಕೆ ಬಜೆಟ್ ಎನ್ನುವುದರಲ್ಲಿ ಸಂಶಯವಿಲ್ಲ ಎಂದು ಅವರು ತಿಳಿಸಿದ್ದಾರೆ.