ವಿಟ್ಲ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ.
ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ, ತಾಯಿ ಹಾಗು ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
























