ಚಕ್ರವರ್ತಿ ಸೂಲಿಬೆಲೆಗೆ ಎಸ್‌ಡಿಪಿಐಯಿಂದ ಎಚ್ಚರಿಕೆ
ಮಂಗಳೂರು: ಹಿಂದೂ ಹುಡುಗರಿಗೆ ಮದುವೆಯಾಗಲು ಹುಡುಗಿ ಸಿಗದಿದ್ದರೆ ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳಿ ಎಂದಿರುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್‌ಡಿಪಿಐ ಸೇರಿ ಹಲವು ಸಂಘಟನೆಗಳ ನಾಯಕರು ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಚಕ್ರವರ್ತಿ ಸೂಲಿಬೆಲೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಹೇಳಿಕೆಗೆ ಸದಾ ಬದ್ಧನಾಗಿರುತ್ತೇನೆ ಎಂದಿದ್ದಾರೆ.
ವಿಶ್ವ ಹಿಂದೂ ಪರಿಷತ್ ಭಾನುವಾರ ಮಂಗಳೂರಿನಲ್ಲಿ ನಡೆದಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆಯ ಸಮಾರೋಪ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಸೂಲಿಬೆಲೆ, ಮತಾಂತರವಾದವರನ್ನು ಘರ್ ವಾಪ್ಸಿ ಮಾಡುವ ಪ್ರಯತ್ನಕ್ಕೆ ಹಿಂದೂ ಯುವಕರನ್ನು ತರಬೇತುಗೊಳಿಸುವಂತೆ ಕರೆ ನೀಡಿ ಹಿಂದೂ ಯುವಕರು ಮದುವೆಗೆ ಹುಡುಗಿಯರು ಸಿಗುತ್ತಿಲ್ಲ ಎಂಬ ಚಿಂತೆ ಮಾಡುವುದು ಬೇಡ, ಅನ್ಯ ಧರ್ಮದ ಯುವಕರನ್ನು ಮದುವೆಯಾಗಿ ಅವರನ್ನು ಹಿಂದು ಧರ್ಮಕ್ಕೆ ಸೇರಿಸಿಕೊಳ್ಳಿ. ಲವ್ ಜಿಹಾದ್ ಬಗ್ಗೆ ಮಾತನಾಡಿ ಸಾಕಾಗಿದೆ ಎಂದಿದ್ದರು.
ಸೂಲಿಬೆಲೆ ಹೇಳಿಕೆಗೆ ಡಿವೈಎಫ್‌ಐ ಮುಖಂಡ ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಕೋಮು ಸೌಹಾರ್ದ ಕೆಡಿಸುವ ಯತ್ನ ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಎಸ್‌ಡಿಪಿಐ, ಮುಸ್ಲಿಂ ಹುಡುಗಿಯರ ತಂಟೆಗೆ ಬಂದರೆ ಹುಷಾರ್ ಎಂದಿದೆ. ಈ ಮಧ್ಯೆ, ಸೋಮವಾರ ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಸೂಲಿಬೆಲೆ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮತಾಂತರವಾದವರನ್ನು ಘರ್ ವಾಪ್ಸಿ ಮಾಡುವ ಪ್ರಯತ್ನಕ್ಕೆ ಹಿಂದೂ ಯುವಕರನ್ನು ತರಬೇತುಗೊಳಿಸಿ, ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ವಿವಾಹವಾಗಿರಿ ಎಂದು ಅಂಕಣಕಾರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಹಿಂದುತ್ವ ಗೌರವಿಸುವ ಜನಪ್ರತಿನಿಧಿಗಳು ನಾಡು ಆಳಿದಾಗ ಹಿಂದೂ ಧರ್ಮ ಸುದೀರ್ಘ ಉಳಿಯಲು ಸಾಧ್ಯ. ವಕ್ಫ್ ಆಸ್ತಿಯ ನವೀಕರಣಕ್ಕೆ 150 ಕೋಟಿ ರೂ. ನೀಡಿರುವ ರಾಜ್ಯ ಸರ್ಕಾರ ಪ್ರಚೋದನೆ ನೀಡಿ ಪ್ರತ್ಯೇಕತೆಯನ್ನು ಹುಟ್ಟುಹಾಕುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಹಿಂದುಗಳಿಗೆ ಏನೂ ಬೆಲೆ ಇಲ್ಲದಂತಾಗಿದೆ. ಹಾಗಾಗಿ ಹಿಂದುತ್ವವವನ್ನು ಗೌರವಿಸುವ ವ್ಯಕ್ತಿಗಳು ನಾಡನ್ನು ಆಳಿದರೆ ಮಾತ್ರ ಹಿಂದೂ ಧರ್ಮ ಸುದೀರ್ಘವಾಗಿ ಬಾಳಲಿದೆ ಎಂದರು.
ಸೂಳೆಬೆಳೆ ಹೆಂಡತಿ ಮಾರಾಟಕ್ಕೆ ಲಭ್ಯ.