ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ವಲಯದ ವಲಯ ಕಚೇರಿ ಮತ್ತು ಸಿ ಎಸ್ ಸಿ ಸೇವಾ ಕೇಂದ್ರವನ್ನು ಉಪ್ಪಿನಂಗಡಿ ರಾಮನಗರದ ಅಲಿಮಮ್ಮ ಅವರ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು.
ಉಪ್ಪಿನಂಗಡಿ ಕಂಬಳ ಸಮಿತಿ ಗೌರವಾಧ್ಯಕ್ಷ ಉಮೇಶ್ ಶೆಣೈ ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ 2 ವಿಭಾಗದ ಜಿಲ್ಲಾ ನಿರ್ದೇಶಕ ಪ್ರವೀಣ್ ದೀಪ ಬೆಳಗಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮಮಟ್ಟದಲ್ಲಿ ಮತ್ತು ವಲಯ ಮಟ್ಟದಲ್ಲಿ ಯಾವ ರೀತಿಯ ಕೆಲಸ ಕಾರ್ಯವನ್ನು ಮಾಡುತ್ತಿದೆ ಎಂದು ಮನವರಿಕೆ ಯಾಗುವಂತೆ ತಿಳಿಸಿದರು.
ಪುತ್ತೂರು ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷ ಲೋಕೇಶ್ ಬೆತ್ತೋಡಿ, ಉಪ್ಪಿನಂಗಡಿ ವಲಯದ ಪ್ರಗತಿ ಬಂದು ಒಕ್ಕೂಟಗಳ ವಲಯ ಅಧ್ಯಕ್ಷ ನಾರಾಯಣ ಕೆಳಗಿನಮನೆ, ನಿನ್ನೀ ಕಲ್ಲು ಒಕ್ಕೂಟದ ಅಧ್ಯಕ್ಷ ಆನಂದ್ ಶುಭ ಹಾರೈಸಿದರು . ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ., ಪ್ರಶಾಂತ ಪೆರಿಯಡ್ಕ ವಲಯದ ಸೇವಾ ಪ್ರತಿನಿಧಿಯವರು, ಸುವಿದಾ ಸಹಾಯಾಕರು ಸಂಘದ ಸದಸ್ಯರು ಉಪಸಿತರಿದ್ದರು. ಮೇಲ್ವಿಚಾರಕ ಶಿವಪ್ಪ ಎಂ.ಕೆ. ಸ್ವಾಗತಿಸಿ, ವಂದಿಸಿದರು.