ಸೂರ್ಯ ಚೈತನ್ಯ ಪ್ರೌಢಶಾಲೆ ಕುತ್ಯಾರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಬ್ರಹ್ಮಾವರದ ಸುಧಾಕರ ಎಂಬವರು ನೀಡಿದ ಭಗವದ್ಗೀತೆಯ ಪುಸ್ತಕಗಳನ್ನು ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ವಿತರಿಸಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂತಿಮ ಸಿದ್ಧತೆಯಲ್ಲಿರುವ ಸಂದರ್ಭದಲ್ಲಿ ಭಗವದ್ಗೀತೆ ಪುಸ್ತಕವು ವಿದ್ಯಾರ್ಥಿಗಳಿಗೆ ಹೊಸ ಚೈತನ್ಯವನ್ನು ನೀಡಲಿದೆ ಎಂದರು.
ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಸುಧಾಕರ ಇವರು ಶ್ರೀ ಕೃಷ್ಣನ ಪರಮ ಭಕ್ತರಾಗಿದ್ದು ಹಲವು ವರ್ಷಗಳಿಂದ ಈ ರೀತಿಯ ಸೇವೆಯನ್ನು ಮಾಡುತ್ತಾ ಬಂದಿದ್ದಾರೆ. ಧಾರ್ಮಿಕ ಸೇವಾ ರೂಪದ ಈ ಕೊಡುಗೆಯನ್ನು ಮಾತೃ ಮಂಡಳಿಯ ಅಧ್ಯಕ್ಷೆ ವಿಜಯಲಕ್ಷ್ಮಿ ತಂತ್ರಿ ಅವರು ಸಂಸ್ಥೆಗೆ ಸಿಗುವಂತೆ ಮಾಡಿದ್ದರು. 8, 9 ಮತ್ತು 10ನೇ ತರಗತಿಯ ಒಟ್ಟು 70ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಈ ಪುಸ್ತಕಗಳನ್ನು ಪಡೆದರು.
ಈ ವೇಳೆ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಂಗೀತ ರಾವ್ ಮತ್ತು ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.