ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು.
ವಿಟ್ಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ರಮೇಶ್ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ಶಾಲಾ ಶಿಕ್ಷಕರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್, ಸದಸ್ಯೆ ನಳಿನಾಕ್ಷಿ, ಪೆರ್ಲಾಪು ಎ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ರಮೇಶ್ ಆಚಾರ್ಯ, ಹಿರಿಯ ಸಹಶಿಕ್ಷಕರಾದ ಗೀತಾ, ಸತೀಶ್, ವಲಯ ಮೇಲ್ವಿಚಾರಕರಾದ ಶಾರದಾ ಎ, ಸೇವಾಪ್ರತಿನಿಧಿಗಳಾದ ಸುಚಿತ್ರಾ ಆಳ್ವ, ಜಲಜಾಕ್ಷಿ, ಭಾರತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಾದ ತಾರನಾಥ, ಅನಂತ ಪದ್ಮನಾಭ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.