ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸಚಿವ ಜಮೀರ್ ಸೂಚನೆ
ಬೆಂಗಳೂರು : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಎಗ ಸರಕಾರಿ ಗುತ್ತಿಗೆಯಲ್ಲಿ ಶೆ.4 ಮೀಸಲಾತಿ ಒದಗಿಸಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಈಗ ಈ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಸಿಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ಘೋಷಣೆಯಾದ ಬೆನ್ನಲ್ಲೆ ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ಗೆ ಸಂಘಟನೆಗಳು ಮನವಿ ಮಾಡಿದ್ದವು. ಕರ್ನಾಟಕ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್ ಮನವಿ ಸಲ್ಲಿಸಿತ್ತು. ಈ ಮನವಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವ ಬಗ್ಗೆ ಮನವಿ ಸಲ್ಲಿಕೆಯಾಗಿದೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಚಿವರು ನಿರ್ದೇಶಿಸಿರುತ್ತಾರೆ ಎಂದು ಜಮೀರ್ ಅಹ್ಮದ್ ಅವರ ವಿಶೇಷ ಕರ್ತವ್ಯಾಧಿಕಾರಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ.
ಇತ್ತೀಚೆಗೆ ಮಂಡಿಸಿದ್ದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ಭರ್ಜರಿ ಕೊಡುಗೆಗಳನ್ನು ನೀಡಿದ್ದರು. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೂ ಶೇ.4ರಷ್ಟು ಮೀಸಲಾತಿ ಕಲ್ಪಿಸಿ ಘೋಷಣೆ ಮಾಡಿದ್ದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆ ಮಾಡುತ್ತಿದೆ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸುತ್ತಿವೆ. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಬಜೆಟ್ ಘೋಷಣೆ ಬಗ್ಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಹಲಾಲ್ ಬಜೆಟ್ ಎಂದು ಟೀಕಿಸಿದ್ದರು.