ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಕಲ್ಲಡ್ಕ ವಲಯದ ಮಾಮೇಶ್ವರ ಒಕ್ಕೂಟದ ಉಮಾಮಹೇಶ್ವರ ದೇವಸ್ಥಾನದ ಸಮುದಾಯ ಭವನ ರಚನೆಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು.
ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ರಮೇಶ್ ದೇವಸ್ಥಾನದ ಆಡಳಿತ ಸಮಿತಿಯವರಿಗೆ ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ದೇವಸ್ಥಾನದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮೇಲ್ವಿಚಾರಕಿ ಸುಗುಣಶೆಟ್ಟಿ, ಮಾಮೇಶ್ವರ ಒಕ್ಕೂಟದ ಸೇವಾ ಪ್ರತಿನಿಧಿ ಯಶೋಧ, ಒಕ್ಕೂಟದ ಅಧ್ಯಕ್ಷರಾದ ಹರೀಶ್ ವಿ ಮಾಡ, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ವೀರಪ್ಪಗೌಡ ರಾಯರ ಬೆಟ್ಟು, ಪದಾಧಿಕಾರಿಗಳಾದ ವಿಶ್ವನಾಥ್ ಗೌಡ, ದಿನೇಶ್ ಮಾಮೇಶ್ವರ ರಾಘವ್ ಗೌಡ ,ಜಗದೀಶ್ ಚಂದ್ರ, ಕಲ್ಯಾಣಿ ಉಮೇಶ್ ಕುಮಾರ್, ಹರೀಶ್ ಕಟ್ಟೆ, ನವೀನ್ ಚಂದ್ರ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.