ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಸಮಾಜಶಾಸ್ತ್ರ ವಿಭಾಗ, ವಿವೇಕಾನಂದ ಕಾಲೇಜು ಪುತ್ತೂರು, ಸಮಾಜಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ, ಒಡಂಬಡಿಕೆ ಕಾರ್ಯಕ್ರಮವಾಗಿ ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತೆಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ಎಂಬ ವಿಷಯದ ಕುರಿತು ಮಾ14 ರಂದು ಒಂದು ದಿನದ ಕಾರ್ಯಗಾರ ನಡೆಯಿತು.
ಎಂ ಎಲ್ ಟಿ ಸಿ ಕಾಲೇಜ್ ಉಜಿರೆ, ಇಲ್ಲಿನ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ವಿದ್ಯಾ ಎಸ್, ಉಪನ್ಯಾಸಕಿ ಜ್ಯೋತಿ ಎಡಪಡಿತ್ತಾಯ, ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಲತಾ B.T , ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಆರತಿ ಕೆ, ವಿದ್ಯಾರ್ಥಿ ಪ್ರತಿನಿಧಿ ಕಿಶೋರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಒಟ್ಟು 110 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಗೆ ಸಂಬಂಧಪಟ್ಟ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು. ನಿರೀಕ್ಷಾ ಅತಿಥಿಗಳನ್ನು ಪರಿಚಯಿಸಿ, ಕಿಶೋರ್ ಕುಮಾರ್ ವಂದಿಸಿದರು. ವಿoದ್ಯಾ ಕಾರ್ಯಕ್ರಮ ನಿರೂಪಿಸಿದರು.