ಮಾ. 22: ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಕಾಲೇಜಿನ ಸ್ವಾಯತ್ತ ಸ್ಥಾನಮಾನದ’ ಉದ್ಘಾಟನೆ

ಪುತ್ತೂರು: ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ  ಫಿಲೋಮಿನಾ ಕಾಲೇಜು, ಕರ್ನಾಟಕ ಸರಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿದ್ದು, ಕಾಲೇಜಿಗೆ ದೊರೆತ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಸಮಾರಂಭ ಮಾ. 22 ರಂದು ಕಾಲೇಜಿನ ಸಭಾಂಗಣದಲ್ಲಿ ಎಂದು ಮಾಯಿದೇ ದೇವುಸ್ ಚರ್ಚ್‍ ಪ್ರಧಾನ ಧರ್ಮಗುರು, ಕಾಲೇಜಿನ ಸಂಚಾಲಕ ಫಾ.ಲಾರೆನ್ಸ್‍ ಮಸ್ಕರೇನಸ್ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ ಅವರು ವಹಿಸಲಿದ್ದು, ಬೆಂಗಳೂರು ಮಹಾನಗರ ಮೆಟ್ರೊಪೊಲಿಟನ್ ಧರ್ಮಪ್ರಾಂತ್ಯದ ಆರ್ಚ್ ಭಿಷಪ್ ಅತಿ ವಂದನೀಯ ಡಾ. ಪೀಟರ್ ಮಚಾದೋ ಉದ್ಘಾಟಿಸಿ, ಆಶೀರ್ವದಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್ ಭಾಗವಹಿಸಲಿದ್ದಾರೆ ಎಂದರು.

ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಸಂಸತ್ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ದ. ಕ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ಕವಿತಾ ಕೆ. ಆರ್, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮ್ಯಾಕ್ಸಿಮ್ ನೊರೊನ್ಹಾ ಹಾಗೂ ಮುಲ್ಕಿ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್‌ನ ಪ್ರಧಾನ ಧರ್ಮಗುರು ವಂ. ಆಂಟನಿ ಮೈಕೆಲ್ ಶೆರಾ ಭಾಗವಹಿಸಲಿದ್ದಾರೆ.

































 
 

“ಆರು ದಶಕಗಳಿಗೂ ಹೆಚ್ಚಿನ ಇತಿಹಾಸವುಳ್ಳ ಸಂತ ಫಿಲೋಮಿನಾ ಕಾಲೇಜಿಗೆ ದೊರೆತ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆಗೆ ನಾವೆಲ್ಲ ಉತ್ಸುಕರಾಗಿದ್ದೇವೆ. ಸ್ವಾಯತ್ತತೆಯು ಕಾಲೇಜಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಈ ಸ್ಥಾನಮಾನ ದೊರೆಯುವಲ್ಲಿ ಶ್ರಮವಹಿಸಿದ ಪ್ರತಿಯೋರ್ವರನ್ನೂ ಈ ಸಂದರ್ಭದಲ್ಲಿ ಅಭಿನಂದಿಸುತ್ತಿದ್ದೇನೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ಸುಕತೆಯಿಂದ ಕಾರ್ಯ ನಿರ್ವಹಿಸಲು ಸ್ವಾಯತ್ತ ಸ್ಥಾನಮಾನವು ಪ್ರೇರಣೆ ನೀಡಿದೆ ಎಂದು ಹೇಳಿದರು.

ಹೊಸ ಕೋರ್ಸ್‌ಗಳು

ಕಾಲೇಜಿನಲ್ಲಿ ಈಗಾಗಲೇ ಪದವಿ ವಿಭಾಗದಲ್ಲಿ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಹಾಗೂ ಬಿಸಿಎ (ಎಐ ಮತ್ತು ಎಂಎಲ್) ಕೋರ್ಸ್‌ಗಳನ್ನು ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಂಎಸ್ ಡಬ್ಲ್ಯೂ, ಎಂಕಾಂ, ಭೌತಶಾಸ್ತ್ರ ಹಾಗೂ ಗಣಿತದಲ್ಲಿ ಎಂಎಸ್ಸಿ ಕೋರ್ಸ್‌ಗಳನ್ನು ನೀಡಲಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಂಸಿಎ ಕೋರ್ಸ್‌ನ್ನು ಪ್ರಾರಂಭಿಸಲಾಗಿದೆ. ಕ್ಷಿಪ್ರಗತಿಯಲ್ಲಿ ಬದಲಾವಣೆ ಹೊಂದುತ್ತಿರುವ ಉದ್ಯೋಗಕ್ಷೇತ್ರದ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬಿಬಿಎ (ಬ್ಯುಸಿನೆಸ್ ಅನಲಿಟಿಕ್ಸ್), ಬಿಸಿಎ (ಡೇಟಾ ಅನಲಿಟಿಕ್ಸ್) ಹಾಗೂ ಬಿಎಸ್ಸಿ ಡೇಟಾ ಸಯನ್ಸ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳ ಸವಾಂಗೀಣ ಅಭಿವೃದ್ಧಿಯನ್ನು ಧ್ಯೇಯವಾಗಿರಿಸಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ನಮ್ಮ ಪಠ್ಯ ಕ್ರಮವನ್ನು ಇನ್ನಷ್ಟು ಕ್ರಿಯಾತ್ಮಕವಾಗಿ ರೂಪುಗೊಳಿಸಿ ವಿದ್ಯಾರ್ಥಿಗಳಿಗೆ ಹಲವು ಐಚ್ಛಿಕ ವಿಷಯಗಳನ್ನು ನೀಡಿ ಕೌಶಲ್ಯಾಧಾರಿತ ಕಲಿಕೆಗೆ ಒತ್ತು ನೀಡಲಾಗುತ್ತದೆ. ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ, ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸಕಾಲಿಕ ಮೌಲ್ಯಮಾಪನ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಕಡೆಗೆ ನಿರಂತರ ಗಮನಹರಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ಪರೀಕ್ಷಾಂಗ ಕುಲಸಚಿವ ಡಾ. ವಿನಯಚಂದ್ರ, ರಿಜಿಸ್ಟ್ರಾರ್ ಅಕಾಡೆಮಿಕ್ ಡಾ. ನಾರ್ಬರ್ಟ್ ಮಸ್ಕರೇನಸ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟಾ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top