ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಚೆಂಗಳದಲ್ಲಿ ನಡೆದಿದೆ.
ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಬೆಂಕಿ ತಗುಲಿದ ಹಿನ್ನಲೆ ಮನೆ ಅಪಾರ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.