ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ್ದಾರೆ.
ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶೈಲಾ ಅವರು ಸಂಸ್ಥೆಯ ಉದ್ದೇಶವನ್ನು ಹಾಗೂ ವಿದ್ಯಾರ್ಥಿಗಳು ನ್ಯೂನತೆಯನ್ನು ಹೊಂದಿದ್ದರು ವಿದ್ಯಾರ್ಥಿಗಳಲ್ಲಿ ಪ್ರತಿಭೆಯಿದೆ ಎಂಬುದನ್ನು ತಿಳಿಸಿದರು.
ಎನ್ ಎಸ್ ಎಸ್ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ಹಣ್ಣು ಹಾಗೂ ಸಿಹಿ ತಿಂಡಿಗಳನ್ನು ನೀಡಿದರು. ಹಸ್ತವಿ ಸ್ವಾಗತಿಸಿ, ಅರ್ಚನಾ ವಂದಿಸಿದರು. ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿದರು.