ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತರ ವಿಭಾಗದ ದಶಮಾನೋತ್ಸವ ಮತ್ತು ಪದವಿ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ ಮಾ.22 ರಂದು ನಡೆಯಲಿದೆ. ಮಾ.23ಕ್ಕೆ ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಹಾಗು ಮಾ.24ಕ್ಕೆ ಕಾಲೇಜು ವಾರ್ಷಿಕೋತ್ಸವ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಜರುಗಲಿದೆ ಎಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸಂಚಾಲಕ, ನ್ಯಾಯವಾದಿ ಮುರಳಿಕೃಷ್ಣ ಕೆ.ಎನ್. ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಖಾತೆಯ ಕೇಂದ್ರ ಶಿಕ್ಷಣ ಸಚಿವ ಡಾ. ಸುಕಾಂತ ಮಜುಂದಾರ್ ನೆರವೇರಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿವೇವಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಅವರು ಗಣ್ಯ ಉಪಸ್ಥಿತರಿರುವರು.

ಸಮಾರಂಭದಲ್ಲಿ ವೈದ್ಯಕೀಯ ಮತ್ತು ಸಮಾಜ ಸೇವೆಯಲ್ಲಿ ಡಾ. ಗೌರಿ ಪೈ, ಕಾನೂನು ವಿಭಾಗದಲ್ಲಿ ಹಿರಿಯ ನ್ಯಾಯವಾದಿ ಎಂ ರಾಮಮೋಹನ್ ರಾವ್, ಸಾಮಾಜಿಕ ಹೋರಾಟ ವಿಭಾಗದಲ್ಲಿ ಡಾ. ಮೋಹನ್ ಕುಮಾರ್ ವೈ, ಶಿಕ್ಷಣ ಕ್ಷೇತ್ರದಲ್ಲಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆ, ಉದ್ಯಮ ಮತ್ತು ವ್ಯವಹಾರದಲ್ಲಿ ಶಂಕರ್ ಗ್ರೂಪ್ಸ್ನ  ಸತ್ಯಶಂಕರ್, ಧಾರ್ಮಿಕ ಮತ್ತು ಸಮಾಜ ಸೇವೆಯಲ್ಲಿ ವೇ. ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್, ಜನಪದ ವಿಭಾಗದಲ್ಲಿ ಡಾ. ರವೀಶ್ ಪಡುಮಲೆ, ಕೃಷಿ ವಿಭಾಗದಲ್ಲಿ ದೇವಿಪ್ರಸಾದ್ ಕಡಮಜೆ, ಮಳೆ ದಾಖಲೀಕರಣದಲ್ಲಿ ಪಿ.ಜಿ.ಎಸ್.ಎನ್ ಪ್ರಸಾದ್, ಯಕ್ಷಗಾನದಲ್ಲಿ ಗೋವಿಂದ ನಾಯಕ್ ಪಾಲೆಚ್ಚಾರು ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.

































 
 

ವಿಚಾರಗೋಷ್ಠಿ:

ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಗಂಟ 12 ರಿಂದ ಭಾರತೀಯ ಶ್ರೀಮಂತ ಜ್ಞಾನ ಸಂಪತ್ತಿನ ಅನಾವರಣ ಕಾರ್ಯಕ್ರಮದಲ್ಲಿ ಶಿಕ್ಷಣದ ಕುರಿತು ಹೊಸ ದೃಷ್ಟಿಕೋನ ಎನ್ನುವ ವಿಚಾರವನ್ನು ಆಧರಿಸಿ ವಿಚಾಗೋಷ್ಟಿ ನಡೆಯಲಿದೆ. ವಿವೇಕಾನಂದ ಆಸ್ಪತ್ರೆ ಮೈಸೂರು ಇಲ್ಲಿನ ಮೂಳೆ ಶಸ್ತ್ರ ಚಿಕಿತ್ಸಾ ತಜ್ಞ ಮತ್ತು ಸ್ವಾಮಿ ವಿವೇಕಾನಂದ ಯುವಜನ ವಿಭಾಗದ ಮಾರ್ಗದರ್ಶಕ ಡಾ. ಸೀತಾರಾಮ್ ಎಂ.ಆರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಮಾರೋಪ ಸಮಾರಂಭದಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನೆ:

ಸಂಜೆ ನಡೆಯುವ ಸಮಾರೋಪದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ ಮತ್ತು ಹಿರಿಯ ವಿದ್ಯಾರ್ಥಿ ಡಿಆರ್‌ಡಿಒ ವಿಜ್ಞಾನಿ ಡಾ. ಮಹಾದೇವ ಭಟ್ ಕಾನತ್ತಿಲ ಭಾಗವಹಿಸಲಿದ್ದಾರೆ. ಕಾಲೇಜಿನ ಸ್ನಾತಕೋತ್ತರ ವಿಭಾಗಗಳಲ್ಲಿ ಕಳೆದ ೧೦ ವರ್ಷಗಳಲ್ಲಿ ವ್ಯಾಸಂಗ ಮಾಡಿ ರ‍್ಯಾಂಕ್ ಗಳನ್ನು ಗಳಿಸಿದ ವಿವಿಧ ವಿಭಾಗದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಾಧಕ ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ ಮುರಳಿಕೃಷ್ಣ ಕೆ ಎನ್ ಅವರು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತ ಪಡಿಸುವ ತುಳುಭಾಷೆಯ ವಿಶೇಷವಾದ ನೃತ್ಯರೂಪಕ ’ಗೆಜ್ಜೆಗಿರಿತ ಬೊಲ್ಪು’ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.

ಮಾ.23 ರಂದು ವಿದ್ಯಾರ್ಥಿ ಸಂಘದ ದಿನಾಚರಣೆಯಾಗಿ ಸಪ್ತಪರ್ಣೋತ್ಸವ ಕಾರ್ಯಕ್ರಮ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮತ್ತು ಕನ್ನಡ ಉಪನ್ಯಾಸಕಿ ಕು ಅರ್ಚನಾ ಆರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮದ್ಯಾಹ್ನ ಗಂಟೆ 12.30 ರಿಂದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ  ನಡೆಯಲಿದೆ ಎಂದು ಹೇಳಿದರು.

ಮಾ.24 ರಂದು ಕಾಲೇಜಿನ ವಾರ್ಷಿಕೋತ್ಸವ ನಡೆಯಲಿದ್ದು, ಬೆಳಿಗ್ಗೆ ಗಂಟೆ 10ಕ್ಕೆ ಸಭಾ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಯಾಗಿರುವ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಮಣಿಪಾಲ ಎಂಬಿಟಿ ಇದರ ಸಹ ನಿರ್ದೇಶಕ ಡಾ. ರವಿಪ್ರಕಾಶ್ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಪೂರ್ವಾಧ್ಯಕ್ಷ ಎಸ್.ಆರ್.ರಂಗಮೂರ್ತಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಷ್ಣುಗಣಪತಿ ಭಟ್, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ ವಿಜಯ ಸರಸ್ವತಿ,  ಉಪಪ್ರಾಂಶುಪಾಲ ಪ್ರೊ. ಶಿವಪ್ರಸಾದ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯ ಮತ್ತು ಅಕ್ಷತಾ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top