ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ಕಾರ್ಯಕ್ರಮ ನಡೆಯಿತು.
ಇದರಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ಫೆಸ್ಟ್ ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಮುಖವರ್ಣಿಕೆ ಸ್ಪರ್ಧೆಯಲ್ಲಿ ದೀಕ್ಷಾ ಎಂ ಕೆ ಹಾಗೂ ರಶ್ಮಿ ಎನ್ ಎಲ್ ಅವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.