ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್ ಕಿರಣ್ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಸಂಭ್ರಮಾಚರಣೆಗೊಂಡು, ಇದೀಗ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 23(ನಾಳೆ) ರಂದು ಬೆಳಗ್ಗೆ 10:30ಕ್ಕೆ ಮತ್ತು 4:30 ರ ಸಮಯಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ.
ಕೌಂಟರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರಾದ ಶೈಲೇಶ್ ಅಂಬೆಕಲ್ಲು ತಿಳಿಸಿದ್ದಾರೆ.