ಕುದ್ಮಾರು : ಕರ್ಕೇರ ಕುಟುಂಬಸ್ಥರ ಕುದ್ಮಾರು ದೋಳ ತರವಾಡು ಮನೆಯ ಗೃಹಪ್ರವೇಶ, ಶ್ರೀ ಧರ್ಮದೈವ ಧೂಮಾವತಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾಪನೆ ಮಾ. 29 ಶನಿವಾರ ಹಾಗೂ ಮಾ.30 ಭಾನುವಾರದಂದು ನಡೆಯಲಿದೆ.
ಮಾ.29ರಂದು ಬೆಳಗ್ಗೆ 9ಗಂಟೆಗೆ ವಾರ್ಷಿಕ ನಾಗತಂಬಿಲ, ಮದ್ಯಾಹ್ನ 1ಗಂಟೆಗೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ದೈವಗಳ ಆಭರಣ ತರುವುದು, ಪೂರ್ಣಕುಂಭ ಸ್ವಾಗತ, ಸಂಜೆ 6 ಗಂಟೆಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ಥಳ ಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ, ಪ್ರಾಕಾರ ಬಲಿ, ಅನ್ನಸಂತರ್ಪಣೆ ಜರುಗಲಿದೆ.
ಮಾ.30 ಭಾನುವಾರದಂದು ಬೆಳಗ್ಗೆ 6 ಗಂಟೆಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ತುಳಸಿ ಪ್ರತಿಷ್ಠೆ, ದ್ವಾರ ಪೂಜೆ, ಬೆಳಗ್ಗೆ ವೃಷಭ ಲಗ್ನದ ಶುಭ ಮುಹೂರ್ತದಲ್ಲಿ ತರವಾಡು ಮನೆಯ ಗೃಹಪ್ರವೇಶ, ಬೆಳಗ್ಗೆ ವೃಷಭ ಲಗ್ನದ ಶುಭಮುಹೂರ್ತದಲ್ಲಿ ಧರ್ಮದೈವ ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ವೆಂಕಟರಮಣ ದೇವರ ಪೂಜೆಯನ್ನು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿದೆ. ಬಳಿಕ ದೈವಗಳ ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಭಕ್ತಾದಿಗಳೆಲ್ಲಾ ಆಗಮಿಸಿ ಪ್ರಸಾದ ಸ್ವೀಕರಿಸಿ, ಶ್ರೀ ದೈವ ದೇವರುಗಳ ಕೃಪೆಗೆ ಪಾತ್ರರಾಗಬೇಕಾಗಿ ಕರ್ಕೇರ ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.